ಮಧುಗಿರಿ:
ಉಪಚುನಾವಣೆ ಮೂಲಕ ಇಡೀ ರಾಷ್ಟ್ರಕ್ಕೆ ಬಳ್ಳಾರಿ, ರಾಮನಗರ, ಜಮಖಂಡಿ, ಮಂಡ್ಯ ಮತದಾರರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ವಿ ಎಸ್ ಉಗ್ರಪ್ಪ ಹೇಳಿದರು.
ಇಂದು ತಮ್ಮ ಪುತ್ರನ ಜೊತೆ ತಾಲ್ಲೂಕಿನ ವೆಂಕಟರಮಣಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಪ್ರವೃತ್ತಿ ಹಾಗೂ ಜನ ವಿರೋಧಿ ನೀತಿಯನ್ನು ಮತದಾರರು ಖಂಡಿಸಿದ್ದಾರೆ. ಬಿಜೆಪಿ ಆಡಳಿತ ಸರಿಯಿಲ್ಲ. ಆಡಳಿತ ನಡೆಸುವುದರಲ್ಲಿ ವಿಫಲರಾಗಿದ್ದೀರಿ ಎಂದು ಮತದಾರರು ಜಾತ್ಯತೀತ ಶಕ್ತಿಗಳಾಗಿರುವ ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ