ಬೆಂಗಳೂರು:
ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.
ಮೋಹನ್ ಕುಮಾರ್(28) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಮಾಚೋಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ, ತಾನು ಜೆಟಿವಿ ಹಾಗೂ ಟಿವಿ6 ನ ವ್ಯವಸ್ಥಾಪಕ ನಿರ್ದೇಶಕನಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಮುಂದಿನ ತನಿಖೆಗಾಗಿ ಆತನನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ