ಬೆಂಗಳೂರು :
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಅಧಿಕಾರಿಗಳು ಯಾರೂ ಸರಿಯಾಗಿ ಭೇಟಿಯಾಗಲು ಸಿಗುವುದಿಲ್ಲ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಈ ಹೊಸ ಆದೇಶದ ಪ್ರಕಾರ ಸರ್ಕಾರಿ ಅಧಿಕಾರಿಗಳು 3.30 ರಿಂದ 5.30 ರ ವರೆಗೆ ಸಾರ್ವಜನಿಕರ ಭೇಟಿಗೆ ಕಚೇರಿಯಲ್ಲೇ ಇರಬೇಕು. ಯಾವುದೇ ಸಭೆಗಳನ್ನು ನಡೆಸಬಾರದು, ನಿಗಧಿ ಮಾಡಿದ ಸಮಯದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸಮಯಾವಕಾಶ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಡಿಸಿ ಕಚೇರಿ, ಬಿಬಿಎಂಪಿ ಸೇರಿದಂತೆ ಎಲ್ಲ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೂ ಈ ಆದೇಶ ಅನ್ವಯವಾಗಲಿದೆ. ಈಗಾಗಲೇ ಈ ಆದೇಶ ಜಾರಿಯಿತ್ತು, ಆದರೆ ಸರಿಯಾಗಿ ಪಾಲನೆಯಾಗದ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ