ಬೆಂಗಳೂರು :
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಅವರು ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಕಾರ್ಮಿಕ ಸಂಘಟನೆಗಳು 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಹಾಗಾಗಿ ಎರಡು ದಿನ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಗೆ ಡಿಜಿಪಿ ನೀಲಮಣಿ ರಾಜು ಅವರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಬಂದೋಬಸ್ತ್ ಗಾಗಿ ಬರೋಬ್ಬರಿ 54 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಜಿಲ್ಲೆಗಳಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜನೆ ಮಾಡಲಾಗಿದೆ.ಜೊತೆಗೆ ಬಲವಂತವಾಗಿ ಬಂದ್ ಮಾಡುವುದು, ತೊಂದರೆ ಕೊಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ