ಹುಬ್ಬಳ್ಳಿ

ನಮ್ಮ ದೇಶದ ಮುಂದಿನ ಪ್ರಧಾನ ಮಂತ್ರಿ ರಾಹುಲ್ ಗಾಂಧಿಯವರೇ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ.
ಇನ್ನೂ ಚುನಾವಣಾ ಸಮಯದಲ್ಲಿ ಪ್ರಧಾನಿ ಮೋದಿ ಅವರು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಆದರಿಂದ ರಾಹುಲ್ ಗಾಂಧಿ ಅವರೇ ದೇಶದ ಮುಂದಿನ ಪ್ರಧಾನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಮೋದಿ ಸರ್ಕಾರದ ವೈಫಲ್ಯಗಳಿಂದಾಗಿ ನಾನು ಅವರು ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ ಎಂದಿದ್ದೇನೆ. ಜನತೆಗೆ ನೀಡಿದ ಭರವಸೆಯನ್ನು ಅವರು ಈಡೇರಿಸಿಲ್ಲ. ಅಲ್ಲದೆ ರಾಹುಲ್ ಗಾಂಧಿ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ, ಅವರೇ ಈ ದೇಶದ ಮುಂದಿನ ಪ್ರಧಾನಿ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








