ಬೆಂಗಳೂರು :
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ನಗರದಲ್ಲಿ ಪೊಲೀಸರಿಗೂ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾಮೂಹಿಕವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಪೊಲೀಸರನ್ನು ಒಳಪಡಿಸಲಾಗುತ್ತಿದೆ. ಇಂತಹ ಸಾಮೂಹಿಕ ಸೋಂಕು ಪತ್ತೆ ಪರೀಕ್ಷೆಯಲ್ಲಿ ಭಾಗವಹಿಸಿದ್ದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
