ಬೀದರ್ :
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಕರ್ನಾಟಕದಲ್ಲಿ ಮೊತ್ತೊಂದು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿನ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಗರಕ್ಕೆ ಹಿಂದಿರುಗಿದ್ದಂತ 62 ವಯಸ್ಸಿನ ಬೀದರ್ ಮೂಲದ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮೊದಲ ಎರಡು ವರದಿಗಳು ನೆಗೆಟಿವ್ ಬಂದಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಮನೆಯಲ್ಲಿ ಮತ್ತೆ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರಾದಾಗ ಕುಟುಂಬಸ್ಥರು ವ್ಯಕ್ತಿಯನ್ನು ಹೈದರಾಬಾದ್‍ಗೆ ಕರೆದೊಯ್ದಿದ್ದರು. ಅಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ.
ಈ ವೇಳೆ, ರಕ್ತದ ಸ್ಯಾಂಪಲ್ ಹಾಗೂ ಗಂಟಲು ದ್ರವ ಪರೀಕ್ಷೆ ವೇಳೆ ಪಾಸಿಟಿವ್ ಬಂದಿತ್ತು ಎನ್ನಲಾಗಿದೆ. ಏತನ್ಮಧ್ಯೆ ಇಂದು ಈ ವೃದ್ಧ ಸಾವನ್ನಪ್ಪಿದ್ದಾರೆ.
ಬೀದರ್ ನಲ್ಲಿನ ಕೊರೊನಾ ವೈರಸ್ ಸೋಂಕಿನಿಂದ ಬಲಿಯಾದ ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿಖರವಾದ ವರದಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ ಬಳಿಕವೇ ಸ್ಪಷ್ಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ