ಬೆಂಗಳೂರು :
ಅಥಣಿ ಹಾಗೂ ಹಿರೇಕೆರೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಇದರಿಂದಾಗಿ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಅಥಣಿ ವಿಧಾನಸಭೆ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿಗೆ ನಾಮಪತ್ರ ವಾಪಸ್ ಪಡೆಯುವಂತೆ ಡಿಸಿಎಂ ಲಕ್ಷ್ಮಣ್ ಸವದಿ ಅವರು ಮನವಿ ಮಾಡಿದ್ದರು. ಹೀಗಾಗಿ ಅಥಣಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗುರು ದಾಸ್ಯಾಳ್ ಅವರು ಅಥಣಿ ಉಪಚುನಾವಣೆ ಕ್ಷೇತ್ರದಿಂದ ನಾಮಪತ್ರ ವಾಪಸ್ ಪಡೆದಿದ್ದಾರೆ.
ಇನ್ನು ಹಿರೇಕೆರೂರು ಕ್ಷೇತ್ರದಲ್ಲಿ ಪಂಚಮಠಾಧೀಶರ ಒತ್ತಡಕ್ಕೆ ತಲೆಬಾಗಿ ಶಿವಲಿಂಗ ಶಿವಾಚಾರ್ಯ ಶ್ರೀಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಸಂಸದ ರಾಘವೇಂದ್ರ ಸಮ್ಮುಖದಲ್ಲಿ ಶಿವಾಚಾರ್ಯ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಮಾಲೆ ಹಾಕುವ ಮೂಲಕ ರಾಘವೇಂದ್ರ ಅವರು ಸ್ವಾಮೀಜಿ ಅವರನ್ನು ಸ್ವಾಗತಿಸಿದ್ದಾರೆ.
ಎರಡೂ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿರುವುದರಿಂದ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
