ಆರ್.ಆರ್.ನಗರ ಉಪ ಚುನಾವಣೆ ; ಮುನಿರತ್ನಗೆ ಬಿಗ್ ರಿಲೀಫ್!!

ಬೆಂಗಳೂರು:

    2018 ರ ವಿಧಾನ ಸಭೆ ಚುನಾವಣೆಯಲ್ಲಿ ಮುನಿರತ್ನ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

     ರಾಜ್ಯ ವಿಧಾನಸಭೆಗೆ 2018ರಲ್ಲಿ ನಡೆದ ಚುನಾವಣೆ ಸಂದರ್ಭ ಆರ್‌.ಆರ್‌. ನಗರ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ, ಹೀಗಾಗಿ ಅರ್ಜಿ ಇತ್ಯರ್ಥ ಆಗುವವರೆಗೆ ಕ್ಷೇತ್ರದ ಉಪ ಚುನಾವಣೆ ನಡೆಸಕೂಡದು ಎಂದು ಮೇಲ್ಮನವಿಯಲ್ಲಿ ಕೋರಲಾಗಿತ್ತು.

     ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾರರ ನಕಲಿ ಗುರುತಿನ ಚೀಟಿ ಪತ್ತೆಯಾಗಿದ್ದವು, ಈ ಅಕ್ರಮದಲ್ಲಿ ಮುನಿರತ್ನ ಭಾಗಿಯಾದ ಆರೋಪವಿದೆ, ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಹತ್ತಿರದ ಪ್ರತಿಸ್ಫರ್ಧಿಯಾಗಿದ್ದ ನನ್ನನ್ನು ಜಯಶಾಲಿ ಎಂದು ಘೋಷಿಸಬೇಕು ಎಂದು ಕೋರಿ ಮುನಿರಾಜುಗೌಡ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

    ಮುನಿರತ್ನ ಅವರ ವಿರುದ್ಧ ದಾಖಲಿಸಲಾಗಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ಹೈಕೋರ್ಟ್‌ ಆದೇಶವನ್ನ ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ಮುನಿರತ್ನ ಅವ್ರಿಗೆ ಬಿಗ್‌ ರಿಲೀಫ್‌ ನೀಡಿದೆ. ಸುಪ್ರಿಂಕೋರ್ಟ್‌ ನ್ಯಾಯಾಧೀಶ ಜೆಸಿ ಎಸ್‌ಎ ಬೊಬ್ಡೆ ಅವ್ರು ಈ ತೀರ್ಪು ನೀಡಿದ್ದು, ಈ ಮೂಲಕ ಆರ್.ಆರ್‌ ನಗರ ಎಲೆಕ್ಷನ್‌ ನಡೆಸಲು ಯಾವುದೇ ಅಡ್ಡಿ ಆತಂಕಗಳು ಇಲ್ಲದಂತಾಗಿದೆ. ಹಾಗಾಗಿ, ನಿಗದಿಯಂತೆ ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಡೆಯಲಿದೆ.

     ಆರ್.ಆರ್.ನಗರ ಉಪ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದ ಬೆನ್ನಲ್ಲಿಯೆ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ್ದ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಪಕ್ಷದ ಎದುರು ನನ್ನ ಬೇಡಿಕೆ ಏನೂ ಇಲ್ಲ. ಹಲವು ಸಲ ಬಿಜೆಪಿ ಕಚೇರಿಗೆ ಬಂದಿದ್ದೇನೆ, ಯಾವಾಗಲೂ ಬರುವ ರೀತಿಯಲ್ಲಿ ಇವತ್ತೂ ಬಂದು ನಾಯಕರನ್ನು ಭೇಟಿ ಮಾಡಿದ್ದೇನೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap