ದಾವಣಗೆರೆ:
ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮಿಯಾಪುರ ಗ್ರಾಮದ ಅಂಜಿನಪ್ಪ (29) ಮತ್ತು ಮನೋಜ್ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ದಾವಣಗೆರೆಯಿಂದ ತ್ಯಾವಣಿಗೆ ಕಡೆಗೆ ಬೈಕಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ. ಎದುರಿನ ಬೈಕ್ ನವರು ರಸ್ತೆಯ ಬದಿಗೆ ಬಿದ್ದರೆ, ಇನ್ನಿಬ್ಬರು ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಹಿಂದಿನಿಂದ ಬಂದ ಲಾರಿ ಗಾಯಾಳುಗಳ ಮೇಲೆ ಹರಿದಿದೆ. ಕೆಲಕಾಲ ಗಾಯಾಳುಗಳು ರಸ್ತೆಯಲ್ಲೇ ನರಳಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನ ಸಿಗದೆ ಕೆಲಕಾಲ ಸ್ಥಳೀಯರು ಪರೆದಾಡಿದ್ದಾರೆ.
ಪರಿಣಾಮ ಸ್ಥಳದಲ್ಲೇ ಒಬ್ಬ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಇನ್ನು ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
