ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ; ಬೈಕ್​ ಸವಾರ ಸ್ಥಳದಲ್ಲೇ ಸಾವು!!

ಮೈಸೂರು:

     ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.

     ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಮೃತರು. ಹುಣಸನಾಳು ಗ್ರಾಮದಿಂದ ನಂಜನಗೂಡಿಗೆ ಸ್ಕೂಟರ್‌ನಲ್ಲಿ ಹೋಗುವ ವೇಳೆ ಅಪಘಾತ‌ ಸಂಭವಿಸಿದೆ.

     ವೇಗವಾಗಿ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಂಜನಗೂಡಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ