ಬಳ್ಳಾರಿ :
ಕಾರು-ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.
ಕುರುಗೋಡು ತಾಲೂಕಿನ ಬ್ಯಾಂಕ್ವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೇಕ್ ಫಿರೋಜಾ ಹಾಗೂ ಆಕೆಯ ಗಂಡ ಯೂಸೂಫ್ ಮೃತಪಟ್ಟ ದುರ್ದೈವಿಗಳು.
ಬ್ಯಾಂಕ್ನಿಂದ ಸ್ಕೂಟಿಯಲ್ಲಿ ವೇಣಿವೀರಾಪುರ ಕಡೆಯತ್ತ ತೆರಳುತ್ತಿದ್ದ ಈ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮುಂಬದಿಯ ಬೈಕ್ಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಿಂಬದಿಯ ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗದ್ದು, ಕಾರಿನೊಳಗಿದ್ದವರಿಗೂ ಕೂಡ ಗಾಯಗಳಾಗಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ