ತುಮಕೂರು :
ನಗರದ ಎಸ್ಐಟಿ ಬಡಾವಣೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಲಕ್ಷ್ಮಮ್ಮ ನಗರದ ಎಸ್.ಐ.ಟಿ ಮುಖ್ಯರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬೈಕ್‍ನಲ್ಲಿ ಬಂದ ಕಾಲೇಜು ಹುಡುಗರು ಲಕ್ಷ್ಮಮ್ಮ ಅವರಿಗೆ ಡಿಕ್ಕಿ ಹೊಡೆದಿದ್ದಾರೆ.
ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಲಕ್ಷ್ಮಮ್ಮ ಎಂಬ ಮಹಿಳೆ ತೀವ್ರ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಗಾಯಗೊಂಡ ಮಹಿಳೆ ಲಕ್ಷ್ಮಮ್ಮ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ಮಹಿಳೆ ಹಾಗೂ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯವು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾಲೇಜು ವಿದ್ಯಾರ್ಥಿಗಳ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ