ಮಡಿಕೇರಿ:
ಸರ್ಕಾರಿ ಬಸ್ ಹಾಗೂ ಬೈಕಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ಹೊರವಲಯದ ಮಂಗಳೂರು ಹೆದ್ದಾರಿಯ ಕೊಯನಾಡು ದೇವರಕೊಲ್ಲಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಇಂದು ಬೆಳಿಗ್ಗೆ 8.30 ಗಂಟೆಗೆ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಕೊಡಗು ಎಸ್ಪಿ, ಸುಮನ್ ಪನ್ನೇಕರ್ ಭೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
