ಬಳ್ಳಾರಿ :
ಜಿಲ್ಲೆಯ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಕೂಡ್ಲಿಗಿ ಮೂಲದ ರಾಜು (34), ಕಾರಿಗನೂರಿನ ರಂಜಿತಾ (24)ಮೃತ ದುರ್ದೈವಿಗಳು. ಹೊಸಪೇಟೆ ನಗರದ ಶಾನ್ ಭಾಗ್ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಂಗಳವಾರ ಬೆಳಗ್ಗೆ ಹಂಪಿಯಿಂದ ಹೊಸಪೇಟೆಗೆ ಟಿವಿಎಸ್ ಎಕ್ಸಲ್ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ. ದಂಪತಿ ಕಳೆದುಕೊಂಡು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
