ರಾಮನಗರ :
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪಿದ ಘಟನೆ ಮಂಗಳವಾರಪೇಟೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಸಚಿನ್(24), ಪ್ರತಾಪ್(24) ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಇವರು ಚಲಾಯಿಸುತ್ತಿದ್ದ ಬುಲೆಟ್ ಬೈಕ್ ನಜ್ಜುಗುಜ್ಜಾಗಿದೆ.
ಚನ್ನಪಟ್ಟಣ ತಾಲ್ಲೂಕಿನ ಕೂಳೂರಿನವರಾದ ಸಚಿನ್ ಮತ್ತು ಪ್ರತಾಪ್ ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡು ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸು ಬುಲೆಟ್ ಬೈಕ್ ಗೆ ಗುದ್ದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
