ಬೆಂಗಳೂರು:
ನಗರದ ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಚಂದನ್ (21), ಸುಮಂತ್ (20), ಲಿಖಿತ್ (21), ವಿನಯ್ (28) ಬಂಧಿತ ಆರೋಪಿಗಳು. ಬಂಧಿತರು ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ವೀಲಿಂಗ್ ಮಾಡಲು ಬಳಸಿದ್ದ 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಮೊಬೈಲ್‌ನಲ್ಲಿ ಈ ಹಿಂದಿನ ವೀಲಿಂಗ್ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬ್ಯಾಟರಾಯನಪುರ ಪೊಲೀಸರು, ತನಿಖೆ ಮುಂದುವರೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ