ಬೆಂಗಳೂರು :
ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ ಗೌಡ ಅವರನ್ನು ನೇಮಕ ಮಾಡಲಾಗಿದೆ.
ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ರಾಜ್ಯ ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಾದ ತುಮಕೂರು ಹಾಗೂ ರಾಮನಗರ ಜಿಲ್ಲೆಗೆ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀ ಬಿ. ಸುರೇಶ್ ಗೌಡ ಹಾಗೂ ಶ್ರೀ ಹುಲುವಾಡಿ ದೇವರಾಜ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಶ್ರೀ ಬಿ. ಸುರೇಶ್ ಗೌಡ ಹಾಗೂ ಶ್ರೀ ಹುಲುವಾಡಿ ದೇವರಾಜ್ ಅವರಿಗೆ ಅಭಿನಂದನೆಗಳು. pic.twitter.com/vf8DNArPU5
— BJP Karnataka (@BJP4Karnataka) June 22, 2020
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿದ್ದ ರುದ್ರೇಶ್ ಅವರನ್ನು ರಾಮನಗರದ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ರುದ್ರೇಶ್ ಅವರನ್ನು ಎತ್ತಂಗಡಿ ಮಾಡಿ ಹುಲುವಾಡಿ ದೇವರಾಜ್ ಅವರನ್ನು ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಹಾಗೇ, ತುಮಕೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
