ಬೆಂಗಳೂರು:
ಅಧಿವೇಶನಕ್ಕೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು ಬಿಜೆಪಿ ಸರ್ಕಾರ ಮುಂದಾಗಿದೆ. ಆ ಮೂಲಕ ಮಾಧ್ಯಮ ಸ್ವಾತಂತ್ರ್ಯ ಹರಣಕ್ಕೆ ಸರ್ಕಾರ ನಿರ್ಧರಿಸಿದಂತಿದೆ.
ಬಹು ನಿರೀಕ್ಷಿತ ಬಿಜೆಪಿ ಸರ್ಕಾರದ ಮೊದಲ ಚಳಿಗಾಲದ ಅಧಿವೇಶನ ನಾಳೆಯಿಂದ ರಾಜಧಾನಿಯ ವಿಧಾನಸೌಧದಲ್ಲಿ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ನೆರೆ ಪರಿಹಾರ ಸೇರಿದಂತೆ ಅನೇಕ ವಿಚಾರಗಳು ಕೋಲಾಹಲವನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಈ ಕುರಿತ ಚರ್ಚೆಗಳನ್ನು ಗಮನಿಸಲು ಇಡೀ ರಾಜ್ಯದ ಜನರೂ ಸಹ ಕಾತರರಾಗಿರುವುದು ಸುಳ್ಳಲ್ಲ. ಆದರೆ, ಇದೀಗ ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ವಿಧಾನಮಂಡಲ ಅಧಿವೇಶನಕ್ಕೆ ದೃಶ್ಯ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಂಬಂಧ ಮಾರ್ಷಲ್ ಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಚಂದನ ವಾಹಿನಿ ಕ್ಯಾಮೆರಾಗಳಿಗೆ ಮಾತ್ರ ಪ್ರವೇಶ ಇದೆ. ಚಂದನ ವಾಹಿನಿಯಿಂದ ದೃಶ್ಯಾವಳಿ ತೆಗೆದುಕೊಂಡು ಪ್ರಸಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಅಧಿವೇಶನಕ್ಕೆ ದೃಶ್ಯ ಮಾಧ್ಯಮಗಳನ್ನು ನಿಷೇಧಿಸುವ ಮೂಲಕ ಕೆಟ್ಟದೊಂದು ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ