ಬೆಂಗಳೂರು :
19ರ ಸೋಮವಾರದಂದಿ ಸಚಿವ ಸಂಪುಟ ರಚನೆಯಾಗಲು ಮುಹೂರ್ತ ಫಿಕ್ಸ್ ಆಗಿದ್ದು, ಸಚಿವರ ಪಟ್ಟಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಮುಖ್ಯಮಂತ್ರಿಗಳಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರಾದರೂ ಇದುವರೆಗೂ ಸಚಿವ ಸಂಪುಟ ವಿಸ್ತರಣೆ ಸಾಧ್ಯವಾಗಿರಲಿಲ್ಲ. ಇದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದರ ಮಧ್ಯೆ ಕೊನೆಗೂ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.
ಒಟ್ಟು 16 ಶಾಸಕರು ಸಚಿವರಾಗುವುದು ಫಿಕ್ಸ್ ಎನ್ನಲಾಗಿದ್ದು, ಸೋಮವಾರ 12 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್.ಸಂತೋಷ್ ರಿಂದ ಸಚಿವರ ಪಟ್ಟಿಗೆ ಫೈನಲ್ ಟಚ್ ನೀಡಲಾಗಿದ್ದು, ಇಬ್ಬರು ನಾಯಕರು ಸಲ್ಲಿಸಿದ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ