ಚಾಮರಾಜನಗರ:

ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಶಾಸಕ ಹೊಡೆದಾಟಕ್ಕೆ ಬಿಜೆಪಿಯೇ ಕಾರಣ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದಕ್ಕೆ ಅವರು ಹೊಡೆದಾಡಿಕೊಂಡಿದ್ದಾರೆ. ಆಪರೇಷನ್ ಕಮಲಕ್ಕೆ ಕೈ ಹಾಕಿದ್ದೇ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ಸಿನ ಎಲ್ಲಾ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಅಲ್ಲದೇ ಕೆಲ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಅವರು ತಮ್ಮೊಂದಿಗೆ ರೆಸಾರ್ಟಿಗೆ ಕರೆದುಕೊಂಡು ಹೋಗಿದ್ದರು. ಸಮ್ಮಿಶ್ರ ಸರ್ಕಾರವನ್ನು ಬೀಳಿಸಬೇಕು ಅಂತ ಈ ರೀತಿ ತಂತ್ರ ಮಾಡುತ್ತಿದ್ದಾರೆ ಅದು ಜನರಿಗೂ ಗೊತ್ತು ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








