ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!!!

ಮೈಸೂರು: 

      ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

      ನಗರದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಜಿಲ್ಲಾ ಪಂಚಾಯತ್ ನಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮುಂದುವರಿಸಲಿದೆ. ಈ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಆದ್ದರಿಂದ ಈ ಬಾರಿಯ ಸಹಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

      ಈ ಹಿಂದೆ ಸ್ಥಳೀಯ ನಾಯಕರು ತೆಗೆದುಕೊಂಡಿದ್ದ ನಿರ್ಧಾರದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಫೆ.23ರಂದು ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆಯಲಿದ್ದು, ಈ ಮೂಲಕ ಹಿಂದಿನ ಒಪ್ಪಂದದಂತೆ ನಮ್ಮ(ಜೆಡಿಎಸ್) ಪಕ್ಷದ ಪರಿಮಳಾ ಶ್ಯಾಮ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap