ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ!

ಮೈಸೂರು :

      ಕೊಡಗು-ಮೈಸೂರು ಸಂಸದ ಪ್ರತಾಪ್​ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯವನ್ನು ಮನಸಾರೆ ಹೊಗಳಿದ್ದಾರೆ.

      ಇತ್ತೀಚಿಗೆ ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು, ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ.  ಆಸ್ಪತ್ರೆ ನಿರ್ಮಾಣಕ್ಕೆ 168 ಕೋಟಿ ರೂ. ಅನುದಾನ ನೀಡಿದ ಸಿದ್ದರಾಮಯ್ಯ ಸಾಹೇಬ್ರಿಗೆ ಧನ್ಯವಾದ ಹೇಳಿದ್ದಾರೆ.‌ ಜೊತೆಗೆ ಅಂದಿನ‌ ಚಾಮರಾಜ ಕ್ಷೇತ್ರದ ಶಾಸಕರಾಗಿದ್ದ ವಾಸು, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್, ಮೈಸೂರು ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ‌ಗೌಡರಿಗೂ ಧನ್ಯವಾದ ಎಂದು ಪ್ರತಾಪ್​ ಸಿಂಹ ಪೋಸ್ಟ್ ಹಾಕಿದ್ದಾರೆ.

      ಮೈಸೂರಿನವರೇ ಆದ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಆಗಾಗ ರಾಜಕೀಯವಾಗಿ ವಾಗ್ದಾಳಿಗಳು ನಡೆಯುತ್ತಲೇ ಇರುತ್ತವೆ. ಮೈಸೂರಿನ ಹಲವು ವೇದಿಕೆಗಳಲ್ಲಿ ಇವರಿಬ್ಬರ ವಾಕ್ಸಮರ ಯಾವಾಗಲೂ ಇದ್ದೇ ಇರುತ್ತದೆ. ಆದರೆ ನಿನ್ನೆ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ಅವರ ಸರ್ಕಾರದ ಸಾಧನೆಗಳನ್ನು ಕೊಂಡಾಡಿ ಸಿದ್ದರಾಮಯ್ಯನವರಿಗೆ ‘ಸಾಹೇಬರು’ ಅಂತ ಉಲ್ಲೇಖಿಸಿ  ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ