ಶಿಮ್ಲಾ :
ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶರ್ಮಾ ಅವರ ಮೃತದೇಹವು ಅವರದ್ಧೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಘಟನಾ ಸ್ಥಳದಿಂದ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಇದು ಆತ್ಮಹತ್ಯೆ ಪ್ರಕರಣವೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
‘ರಾಮ್ ಶರ್ಮಾ ಅವರು ತಮ್ಮ ಫೋನ್ ಕರೆಗೆ ಉತ್ತರಿಸುತ್ತಿರಲಿಲ್ಲ. ಈ ಬಗ್ಗೆ ಅವರ ಆಪ್ತ ಸಹಾಯಕ ನಮಗೆ ಮಾಹಿತಿ ನೀಡಿದರು. ತಕ್ಷಣವೇ ಅವರ ಮನೆಗೆ ತೆರಳಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಅವರ ದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಅವರು ಮಾಹಿತಿ ನೀಡಿದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯನ್ನು ಮುಂದೂಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
