ಬೆಂಗಳೂರು :
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದಿಂದ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.
ಕಳೆದ ಕೆಲ ದಿನಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರೆ ಪರಿಹಾರ ವಿಳಂಬ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸಂಸದರನ್ನು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ, ಯತ್ನಾಳ್ ಅವರಿಗೆ ಇಂದು ಪಕ್ಷದಿಂದ ಶೋಕಾಸ್ ನೊಟೀಸ್ ಜಾರಿ ಮಾಡಲಾಗಿದೆ.
ಕೇಂದ್ರದ ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕರಿಗೆ ನೊಟೀಸ್ ಜಾರಿ ಮಾಡಿದ್ದು, ಇನ್ನು 10 ದಿನದೊಳಗೆ ಕಾರಣ ನೀಡುವಂತೆ ಸೂಚಿಸಲಾಗಿದೆ. ನೋಟೀಸ್ ನಲ್ಲಿ ಕೇಂದ್ರ, ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದ್ದೇಕೆ, ಪಕ್ಷದ ನಾಯಕರ ವಿರುದ್ಧ ಜನತೆಯನ್ನು ಪ್ರಚೋದಿಸುತ್ತಿದ್ದೀರಾ, ನೆರೆ ಪರಿಹಾರ ವಿಚಾರದಲ್ಲಿ ಸುಳ್ಳು ಹರಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದು, ಹತ್ತು ದಿನಗಳಲ್ಲಿ ಕಾರಣ ನೀಡುವಂತೆ ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ