ತುಮಕೂರು:
ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ನೂತನ ಸಂಸದ ಜಿ.ಎಸ್.ಬಸವರಾಜು ಅವರ ಭಾವಚಿತ್ರ ಯಾವ ಫ್ಲೆಕ್ಸ್ ನಲ್ಲಿ ಹಾಕಿಲ್ಲ ಎಂದು ವಿರೋಧಿಸಿ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ