ತುಮಕೂರು : ಡಿಸಿಎಂಗೂ ತಟ್ಟಿದ ಪ್ರತಿಭಟನೆ ಬಿಸಿ!!!

ತುಮಕೂರು :

     ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಬಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರಿಗೂ ತಗುಲಿದೆ.

       ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ನೂತನ ಸಂಸದ ಜಿ.ಎಸ್.ಬಸವರಾಜು ಅವರ ಭಾವಚಿತ್ರ ಯಾವ ಫ್ಲೆಕ್ಸ್ ನಲ್ಲಿ ಹಾಕಿಲ್ಲ. ಆದರೆ, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ರವರ ಭಾವ ಚಿತ್ರ ಮಾತ್ರಹಾಕಿ ತಾರತಮ್ಯಮಾಡಲಾಗಿದೆ ಎಂದು ಆರೋಪಿಸಿ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ; ಬಿಜೆಪಿ ಪ್ರತಿಭಟನೆ

      ಪ್ರತಿಭಟನೆ ಹಿನ್ನೆಲೆ ಕಾಮಗಾರಿ ಉದ್ಘಾಟನೆ ಮಾಡಲಿರುವ ಡಿಸಿಎಂ ಜಿ.ಪರಮೇಶ್ವರ್ ರವರು ಕಾರ್ಯಕ್ರಮಕ್ಕೆ ಆಗಮಿಸದೇ ತುಮಕೂರು ಪ್ರವಾಸಿ ಮಂದಿರಲ್ಲಿಯೇ ಉಳಿದುಕೊಂಡಿದ್ದಾರೆ. 11 ಗಂಟೆಗೆ ಪ್ರಾರಂಭವಾಗಬೇಕಿದ್ದ ಉದ್ಘಾಟನಾ ಕಾರ್ಯಕ್ರಮ ಶುರುವಾಗಬೇಕಿತ್ತು.

       ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್,  ಹತ್ತು ನಿಮಿಷಗಳ ಕಾಲ ಸಮಾಯಾವಕಾಶ ಕೇಳಿದ್ದು ನಗರದಲ್ಲಿ ಹಾಕಲಾದ ಫ್ಲೆಕ್ಸ್ ತೆಗೆದ ನಂತರ ಕಾರ್ಯಕ್ರಮ ಮಾಡಲಾಗುವುದು. ಈ ಬಗ್ಗೆ ಡಿಸಿಎಂ ಜೊತೆ ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap