ಬೆಂಗಳೂರು :
ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೈತ್ರಿ ನಾಯಕರಿಗೆ ಬಹಿರಂಗ ಸವಾಲೆಸೆದಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ,ನಾವು ಆಪರೇಷನ್ ಕಮಲ ಮಾಡುತ್ತೀವಿ ಎಂದು ಎಲ್ಲಿಯೂ ಹೇಳಿಲ್ಲ. ಆದರೆ ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆ ನೀಡಿದ್ದಾರೆ. ತಮ್ಮ ಗೊಂದಲ ಮುಚ್ಚಿಹಾಕಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ರಿವರ್ಸ್ ಆಪರೇಷನ್ ಮಾಡುವುದಾದರೆ ಮಾಡಲಿ. ಎಂದು ಮೈತ್ರಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಬಿಜೆಪಿ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನಮ್ಮ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಬರುವುದಿಲ್ಲ. ಏಕೆಂದರೆ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಯಾರಾದರು ಇರಳು ಕಂಡ ಬಾವಿಗೆ ಹಗಲಿನಲ್ಲಿ ಬೀಳುತ್ತಾರೆಯೇ ಎಂದು ವ್ಯಂಗ್ಯವಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ