ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗಿಲ್ಲದಿದ್ದರೂ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರು ಇಂದು ನಾಮಪತ್ರ ಸಲ್ಲಿಸಿ, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.
ತುಮಕೂರು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ಅವರು ಬಿಜೆಪಿಯಿಂದ ಟಿಕೆಟ್ ಖಚಿತವಾದ ಬಳಿಕ ಮತ್ತೆ ಮಾ. 26 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಈ ಮೊದಲು ವೀರಶೈವ ಲಿಂಗಾಯತ ಸಮುದಾಯದ ಜಿ.ಎಸ್.ಬಸವರಾಜುಗೆ ಟಿಕೆಟ್ ಎನ್ನಲಾಗಿತ್ತು. ಆದರೆ ದೇವೇಗೌಡರ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಬಿಜೆಪಿಯಿಂದಲೂ ಒಕ್ಕಲಿಗ ಅಭ್ಯರ್ಥಿ ಅಥವಾ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರ ನಡೆದಿದೆ ಎನ್ನಲಾಗಿದೆ.