ನವದೆಹಲಿ:
ದೋಸ್ತಿ ಸರ್ಕಾರವನ್ನು ಪತನಗೊಳಿಸಲೇಬೇಕೆಂದು ಹಠ ಹಿಡಿದಿರುವ ಬಿಜೆಪಿ ತನ್ನ ಎಲ್ಲಾ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಹರಿಯಾಣದ ರೆಸಾರ್ಟ್‍ವೊಂದಕ್ಕೆ ಕರೆದೊಯ್ಯಲಿದೆ.
ಎಲ್ಲ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುವಂತೆ ಅಮಿತ್ ಶಾ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆಯಿಂದ ನೇರವಾಗಿ ಹರಿಯಾಣದ ಗುರುಗ್ರಾಮದ ಬಳಿ ಇರುವ ರೆಸಾರ್ಟ್ ಗೆ ತೆರಳಲು ಸಿದ್ಧರಾಗಿದ್ದಾರೆ.
ಶಾಸಕರೆಲ್ಲರೂ ರೆಸಾರ್ಟ್‍ಗೆ ಹೊರಡಲು ಸಿದ್ದರಾಗಬೇಕು. ಮುಂದೆ ನಡೆಯುವ ಬೆಳವಣಿಗೆಗಳನ್ನು ಅಲ್ಲಿಯೇ ತಿಳಿಸುತ್ತೇನೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಈ ಮೊದಲು ಶಾಸಕರನ್ನು ಮುಂಬೈ ರೆಸಾರ್ಟ್‍ಗೆ ಕರೆದೊಯ್ಯಲು ತೀರ್ಮಾನಿಸಲಾಗಿತ್ತು. ಆದರೆ ಹರಿಯಾಣ ಸುರಕ್ಷಿತ ಸ್ಥಳವೆಂಬ ಕಾರಣಕ್ಕಾಗಿ ನಿರ್ಧಾರವನ್ನು ಬದಲಾಯಿಸಲಾಗಿದೆ.
ಇಂದು ಸಂಜೆ ಹರಿಯಾಣ ಹೊರವಲಯದಲ್ಲಿರುವ ರೆಸಾರ್ಟ್‍ವೊಂದರಲ್ಲಿ ಬಿಜೆಪಿಯ 104 ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗುವ ಲಕ್ಷಣಗಳು ಗೋಚರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ