ತುಮಕೂರು:
ಜಿಲ್ಲೆಯ ಶಿರಾ ವಿಧಾನಸಭೆಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವಿನ ನಗೆ ಬೀರಿದ್ದಾರೆ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ರಾಜೇಶ್ ಗೌಡ 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ವೋಟ್ಗಳನ್ನ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲಿನಿಂದಲೂ ಸತತ ಮುನ್ನಡೆ ಸಾಧಿಸುವ ಮೂಲಕ ಗೆಲುವು ಪಡೆದುಕೊಂಡು ಶಿರಾ ಕ್ಷೇತ್ರದಲ್ಲಿ ಕಮಲ ಅರಳಿದೆ. ಈ ಮೂಲಕ ಇತಿಹಾಸ ಸೃಷ್ಟಿಯಾಗಿದೆ ಎಂಬ ಮಾತು ಕೇಳಿಬರುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ