ಬೆಂಗಳೂರು :
ಬಿಎಂಟಿಸಿ ಬಸ್ ಪ್ರಯಾಣದ ವೇಳೆ ಇನ್ಮುಂದೆ ಪ್ರಯಾಣಿಕರು ಮೊಬೈಲ್‌ನಲ್ಲಿ ಸ್ಪೀಕರ್ ಮೂಲಕ ಹಾಡು ಕೇಳುವಂತಿಲ್ಲ ಎಂದು ತಿಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಶಾಕ್ ನೀಡಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ತಿಳಿಸಿದ್ದು, ಈ ಕುರಿತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ ನಿಯಮ 94(1) (V) ಉಲ್ಲಂಘಿಸಿ ಹಾಡುಗಳನ್ನು ಹಾಕುತ್ತಿರುವುದರಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ಹೇಳಲಾಗಿದ್ದು, ಶಬ್ದ ಮಾಲಿನ್ಯದಿಂದ ಇತರೆ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವ ಕುರಿತು ಉಚ್ಚ ನ್ಯಾಯಾಲಯದಲ್ಲಿ ಈಗಾಗಲೇ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು ಹಿನ್ನೆಲೆಯಲ್ಲಿ, ಬೆಂಗಳೂರು ಮಹಾನಗರ ಸಂಸ್ಥೆಯ ಬಸ್ಸುಗಳಲ್ಲಿ ಮೊಬೈಲ್ ಸ್ಪೀಕರ್ ನಲ್ಲಿ ಹಾಡು ಹಾಕುವುದನ್ನು ನಿಷೇಧಿಸಲಾಗಿದೆ.
ಚಾಲಕ ಮತ್ತು ನಿರ್ವಾಹಕರು ಈ ಕುರಿತು ಪ್ರಯಾಣಿಕರಿಗೆ ತಿಳುವಳಿಕೆ ನೀಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ