ಬೆಂಗಳೂರು:
ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸಲು ಚಿಂತನೆ ಇದ್ದು, ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು.
ಈಗಾಗಲೇ ನಾಲ್ಕು ಮೂರು ಸಾರಿಗೆ ನಿಗಮಗಳ ಟಿಕೆಟ್ ದರವನ್ನು ಕಳೆದ ವರ್ಷ 12% ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಟಿಕೆಟ್ ದರವನ್ನು ಹೆಚ್ಚಳ ಮಾಡಿಲ್ಲ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಇದ್ದು, ದರ ಹೆಚ್ಚಿಸುವ ಚಿಂತನೆ ಇದೆ ಎಂದು ಸ್ಪಷ್ಟಪಡಿಸಿದರು.
ಬಿಎಂಟಿಸಿ ಸುಮಾರು 18% ಟಿಕೆಟ್ ದರ ಹೆಚ್ಚಿಸುವಂತೆ ಪ್ರಸ್ತಾಪ ಮಾಡಿದ್ದಾರೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಿಲ್ಲ. ಇದರಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ವೃದ್ಧಿಸುವ ಚಿಂತನೆ ಇದೆ ಎಂದರು.
ಟಿಕೆಟ್ ದರ ಹೆಚ್ಚಳ ಸಂಬಂಧ ಸಿಎಂ ಜೊತೆ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ. ಸಿಎಂ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಟಿಕೆಟ್ ದರ ಹೆಚ್ಚಳ ಬೇಡ ಅಂದರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ