ಕಾರವಾರ :
ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆಯಾಗಿದ್ದು , ಬೋಟ್ ನಲ್ಲಿದ್ದ 15 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಹೊನ್ನಾವರ ದಡದಿಂದ 40 ನಾಟಿಕಲ್ ಮೈಲು ದೂರದಲ್ಲಿ ಇಂದು ಈ ಘಟನೆ ಸಂಭವಿಸಿದ್ದು, ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದ ದುರ್ಗಾ ಭೈರವಿ ಹೆಸರಿನ ಬೋಟ್ ಮುಳುಗಡೆ ಆಗಿದೆ.
ವಿಪರೀತ ಗಾಳಿ ಹೆಚ್ಚಾಗಿದ್ದರಿಂದ ಬೋಟ್ ಮುಳುಗಡೆಯಾಗಿದೆ ಎನ್ನಲಾಗಿದ್ದು, ಅಲ್ಲೆ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ಮೀನುಗಾರಿಕಾ ಬೋಟ್ ಮುಳುಗುತ್ತಿದ್ದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
