ಬೊಲೆರೋ-ಟ್ರಾಕ್ಟರ್ ಮುಖಾಮುಖಿ ; ನಾಲ್ವರ ದಾರುಣ ಸಾವು!!

ಧನ್​ಬಾದ್​​ :

    ಬೊಲೆರೊ ಮತ್ತು ಟ್ರ್ಯಾಕ್ಟರ್​​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.

    ಧನ್​ಬಾದ್​ನ ರಾಜ್‌ಗಂಜ್ ಬಳಿಯ ಜಿಟಿ ರಸ್ತೆಯಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಇತರ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

     ಘಟನೆ ಬಳಿಕ ಸುಮಾರು ಮೂರು ಗಂಟೆಗಳ ಕಾಲ ಜಿಟಿ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಕ್ರೇನ್ ಸಹಾಯದಿಂದ ನುಜ್ಜುಗುಜ್ಜಾದ ವಾಹನಗಳನ್ನು ರಸ್ತೆಯಿಂದ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

     ಮೃತರನ್ನು ರಾಹುಲ್ ಪಾಂಡೆ, ಸಲೀಮ್ ಶೇಖ್, ಅತಿಕುಲ್ ಶೇಖ್ ಮತ್ತು ಅಂಜರುಲ್ ಶೇಖ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಗಂಜ್ ಠಾಣಾ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap