ದೆಹಲಿ :
ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್) ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಸಿದ್ದತೆ ನಡೆಸಿದೆ.
ಕೇಂದ್ರ ಸರ್ಕಾರವು ಭಾರತ್ ಪೆಟ್ರೋಲಿಯಂ ನಲ್ಲಿ ಹೊಂದಿರುವ ಷೇರು ಪಾಲಿನಲ್ಲಿ ಶೇಕಡ 53.3 ರಷ್ಟನ್ನು ಮಾರಾಟ ಮಾಡಲು ಉದ್ದೇಶಿಸಿದ್ದು, ಇದಕ್ಕೆ ಸಂಸತ್ ಒಪ್ಪಿಗೆ ಬೇಕಿರುವುದರಿಂದ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗಿದೆ ಎಂದು ಹೇಳಲಾಗಿದೆ.
ಇಂಧನ ಮಾರಾಟದಲ್ಲಿ ಸ್ಪರ್ಧೆ ಹೆಚ್ಚಿಸುವ ಉದ್ದೇಶದಿಂದ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ದೇಶದಲ್ಲಿ ಅತಿ ದೊಡ್ಡ ತೈಲಾಗಾರ, ಇಂಧನದ ರಿಟೇಲ್ ಕಂಪನಿಯಾಗಿರುವ ಭಾರತ್ ಪೆಟ್ರೋಲಿಯಂ ಖಾಸಗೀಕರಣ ಮಾಡುವುದರಿಂದ ಸರ್ಕಾರದ ಷೇರು ವಿಕ್ರಯದ ಗುರಿ ತಲುಪಲು ಅನುಕೂಲವಾಗುತ್ತದೆ ಎಂದು ಚಿಂತಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ