ಬೆಂಗಳೂರು:
ಆನ್‌ಲೈನ್ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್‌ಲೈನ್ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಫೈಲ್ ಪರಿಶೀಲಿಸಿ ಆನ್‍ಲೈನ್ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇನ್ನು ತಾವು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ನಂತರ ಮದ್ಯ ಮಾರಾಟ ಹೆಚ್ಚಳವಾಗಿದೆ ಎಂಬ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾನು ಪ್ರಚಾರಕ್ಕೆ ಹೋಗಿ ಬಂದ ಬಳಿಕ ಬಿಜೆಪಿಯವರು ಗಾಬರಿಗೊಂಡಿದ್ದಾರೆ. ಪಕ್ಷದ ಬಿಜೆಪಿ ನಾಯಕರೆಲ್ಲ ಸೇರಿ ಹೆಚ್ಚಿನ ರೀತಿ ಮದ್ಯದ ಮೂಲಕ ಮತದಾರರಿಗೆ ಆಮಿಷ ನೀಡಲು ಮುಂದಾಗಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.