ಚಿಕ್ಕಮಗಳೂರು :
ನೀರಿನ ಟ್ಯಾಂಕರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಅಣ್ಣ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಳೆ ಲಕ್ಯಾ ಗ್ರಾಮದಲ್ಲಿ ನಡೆದಿದೆ.
ಲತಾ ಮಣಿ (25) ಹಾಗೂ ಅಶೋಕ್ (30) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಬೈಕಿನಲ್ಲಿದ್ದ ಮಗುವಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಕಡೂರಿನ ಎಸ್. ಬಿದರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತರು ಬಿದರೆ ಗ್ರಾಮದಿಂದ ಚಿಕ್ಕಮಗಳೂರಿಗೆ ಹೋಗುವಾಗ ಹಳೆ ಲಕ್ಯಾ ಗ್ರಾಮದಲ್ಲಿ ಬಳಿ ಇವರ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ನೀರಿನ ಟ್ಯಾಂಕರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಣ್ಣ-ತಂಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಾಯಗೊಂಡಿದ್ದ ಮಗುವನ್ನು ಟ್ಯಾಂಕರ್ ಚಾಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾನೆ. ಇನ್ನು ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








