ವಿಜಯಪುರ :
ಪ್ರತ್ಯೇಕ ಸ್ಥಳಗಳಲ್ಲಿ ದುಷ್ಕರ್ಮಿಗಳು ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕತ್ತು ಕುಯ್ದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಗಾಂಧಿ ಚೌಕ ಹಾಗೂ ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸರ್ಕಾರಿ ಹೈಸ್ಕೂಲ್ ಆವರಣದಲ್ಲಿ ಅಣ್ಣ ಸಲೀಂ ಅಬ್ದುಲ ಗಣಿ ಕೋಚಮನ(35)ನನ್ನು ಜೈ ಕರ್ನಾಟಕ ಕಾಲನಿಯ ಮನೆಯ ಬಳಿಯೇ ಎಸೆದಿದ್ದಾರೆ. ಹಾಗೂ ತಮ್ಮ ರಜಾಕ್ ಅಬ್ದುಲ್ ಗಣಿ ಕೋಚಮನ(28) ನನ್ನು ಗಾಂಧಿ ವೃತ್ತದ ಸರಕಾರಿ ಕಾಲೇಜು ಆವರಣದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದ್ದು, ಮೃತ ಸಹೋದರರು ಕೂಲಿ ಕಾರ್ಮಿಕರಾಗಿದ್ದರು ಎಂದರು ತಿಳಿದುಬಂದಿದೆ. ಜೋಡಿ ಕೊಲೆಯಿಂದ ವಿಜಯಪುರ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಅಶೋಕ್, ಗೋಲಗುಮ್ಮಟ ಪಿಎಸ್ ಐ ಕಲ್ಲೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಗಾಂಧಿ ಚೌಕ್ ಹಾಗೂ ಗೋಲಗುಮ್ಮಟ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
