ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವು ನಮ್ಮ ಗುರಿ

ಬೆಂಗಳೂರು : 

      ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವುದೇ ನಮ್ಮ ಗುರಿ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

      ಗ್ರಾಮಪಂಚಾಯ್ತಿ ಚುನಾವಣೆಯಲ್ಲಿನ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಮೈ ಮರೆಯದೆ ಸದ್ಯವೇ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಯಲ್ಲೂ ಗೆಲುವಿನ ಯಾತ್ರೆ ಮುಂದುವರಿಯಬೇಕೆಂದು ಅವರು ಹೇಳಿದರು.
ಶಿವಮೊಗ್ಗದಲ್ಲಿಂದು ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾ.ಪಂ. ಫಲಿತಾಂಶ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉಲ್ಲಾಸ, ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದರು.

      ಹಠ, ಛಲ ಮತ್ತು ಗುರಿ ಇದ್ದು ಗುರಿ ಮುಟ್ಟುವ ದಾರಿ ಗೊತ್ತಿರಬೇಕು. ಆಗ ಮಾತ್ರವೇ ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯ ಎಂದವರು ಹೇಳಿದರು. ಇನ್ನೆರಡು ವರ್ಷಗಳ ನಂತರ ಬರುವ ವಿಧಾನ ಸಭಾ ಚುನಾವಣೆ ಯಲ್ಲಿ ಬಿಜೆಪಿ ೧೫೦ ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಬೇಕು. ಅದಕ್ಕಾಗಿ ಈಗಿಂದಲೇ ನಮ್ಮೆಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತ ರಾಗಬೇಕೆಂದು ಕರೆನೀಡಿದರು.
ಜನಸಂಘ ಕಾಲದ ನಮ್ಮ ಹಿರಿಯರ ಅಪೇಕ್ಷೆಯಂತೆ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಿ ಅನ್ನದಾತ ರೈತರನ್ನು ಸ್ವಾವಲಂಬಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ನುಡಿದರು.

     ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ಗ್ರಾ.ಪಂ. ಚುನಾವಣೆ ಬಳಿಕ ಬಿಜೆಪಿ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಆಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮೂಲಕ ಯಡಿಯೂರಪ್ಪ ನುಡಿದಂತೆ ನಡೆವವರು ನಾವು ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದರು. ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜಾರೋಹಣ ಮಾಡಿದ ಬಳಿಕ ಗೋಪೂಜೆ ನೆರವೇರಿಸಿದರು.

      ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದಕ್ಕಾಗಿ ರೈತ ದಂಪತಿಗಳು ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಅವರನ್ನು ಕೃಷಿ ಉತ್ಪನ್ನಗಳನ್ನು ಸಮರ್ಪಿಸಿ ಅಭಿನಂದಿಸಿದರು.

     ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ, ಡಿ.ಹೆಚ್.ಶಂಕರಮೂರ್ತಿ, ಭಗವಂತ ಖೂಬ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap