ನಳಿನ್ ಪದಗ್ರಹಣ ಕಾರ್ಯಕ್ರಮ : ಪ್ರಮುಖ ಸಚಿವರ ಗೈರು!!

ಬೆಂಗಳೂರು:

      ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ್ದಾರೆ.

      ನಗರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನೂತನ ರಾಜ್ಯಾಧಕ್ಷರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

      ಈ ವೇಳೆ ಮಾತನಾಡಿದ ನಳೀನ್ ಕುಮಾರ್ ಕಟೀಲು, ಸಾಮಾನ್ಯ ಕಾರ್ಯಕರ್ತನೊಬ್ಬ ಪ್ರಧಾನಿಯಾಗುವುದು, ಮುಖ್ಯಮಂತ್ರಿಯಾಗುವುದು, ರಾಜ್ಯಾಧ್ಯಕ್ಷನಾಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ನಾನು ರಾಜ್ಯವನ್ನು ಪ್ರತಿನಿಧಿಸಲಿದ್ದೇನೆ. ನಾನು ವಿದ್ವಾಂಸನಲ್ಲ, ಪಂಡಿತನೂ ಅಲ್ಲ. ನಾನು ಸಂಘದ ಸಾಮಾನ್ಯ ಕಾರ್ಯಕರ್ತ. ಸಂಘದ ಕಾರ್ಯಕರ್ತರು ‌ನನ್ನ ಬೆಳೆಸಿದ್ದಾರೆ. ಕಾರ್ಯಕರ್ತರ ಅಪೇಕ್ಷೆಗೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಸಿಎಂ ಮತ್ತು ತಂಡದ ಮಾರ್ಗದರ್ಶನದಂತೆ ನಡೆಯುತ್ತೇನೆ. ಈ ಜವಾಬ್ದಾರಿಯನ್ನು ನಿರ್ವಹಿಸಲು ಭಯವೂ ಇದೆ, ಆತ್ಮವಿಶ್ವಾಸವೂ ಇದೆ. ಯಡಿಯೂರಪ್ಪನವರಂಥ ನಾಯಕರ ಆಶೀರ್ವಾದ ನನ್ನ ಮೇಲಿದೆ. ಯಡಿಯೂರಪ್ಪ, ಈಶ್ವರಪ್ಪ, ಅನಂತ್ ಕುಮಾರ್ ರಂಥವರ ಪರಿಶ್ರಮದಿಂದ ಪಕ್ಷ ಬೆಳೆದುಬಂದಿದೆ. ಆ ಪಕ್ಷವನ್ನು ನಾವು ಮುನ್ನಡೆಸಿಕೊಂಡು ಹೋಗಬೇಕಿದೆ ಎಂದು ಹೇಳಿದ್ದಾರೆ.

       ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇತರ ಸಚಿವರು, ಹಲವು ಶಾಸಕರು, ಸಂಸದರು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

       ಆದರೆ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಸಚಿವರಾದ ಆರ್.ಅಶೋಕ್, ಶ್ರೀರಾಮುಲು ಗೈರು ಹಾಜರಾಗಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ಆತುರವಾಗಿ ವೇದಿಕೆಗೆ ಆಗಮಿಸಿ ಶುಭಕೋರಿ ತುರ್ತು ಕೆಲಸವಿದೆ ಎಂದು ಹೇಳಿ ನಿರ್ಗಮಿಸಿದ್ದರು.

      ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇದರಿಂದ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆನ್ನಲಾಗಿದೆ. ಪದಗ್ರಹಣ ಸಮಾರಂಭಕ್ಕೆ ಬಿಜೆಪಿಯ ಪ್ರಮುಖ ಸಚಿವರು ಗೈರುಹಾಜರಾಗುವ ಮೂಲಕ ಪಕ್ಷದೊಳಗಿನ ಅಸಮಾಧಾನ ಬಹಿರಂಗಗೊಂಡಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap