ಬೆಂಗಳೂರು :

ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿರುವ ನಿಯೋಜಿತ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿರವರು ಹೊರಡಿಸಿದ್ದ, ಜುಲೈನಲ್ಲಿ ಆಗಿರುವ ಎಲ್ಲ ಆದೇಶಗಳನ್ನು ತಡೆ ಹಿಡಿಯುವಂತೆ ಸೂಚನೆ ನೀಡಿದ್ದಾರೆ.
ಮೈತ್ರಿ ಸರ್ಕಾರ ಅಂತಿಮ ದಿನಗಳಲ್ಲಿ ಸಾಕಷ್ಟು ವರ್ಗಾವಣೆಗಳು ಜುಲೈ ತಿಂಗಳಿನಲ್ಲಿಯೇ ನಡೆದಿತ್ತು. ಅಲ್ಲದೇ ಇದೇ ಕ್ರಮದಲ್ಲಿ ದೋಸ್ತಿ ಸರ್ಕಾರ ದುಡ್ಡು ಮಾಡಲು ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಗಾವಣೆ ನಡೆದಿದೆ. ರೇವಣ್ಣ ಅವರ ಇಲಾಖೆಯಲ್ಲೇ ಅತಿ ಹೆಚ್ಚು ವರ್ಗಾವಣೆ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿ ವಿಜಯ ಬಾಸ್ಕರ್ ಅವರಿಗೆ ನಿಯೋಜಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರ ಬರೆದಿದ್ದು, ಜುಲೈ ತಿಂಗಳಲ್ಲಿ ನಡೆಸಿರುವ ಹೊಸ ಯೋಜನೆಗಳು ಹಾಗೂ ವರ್ಗಾವಣೆ ಮಾಡುವ ಸಂಬಂಧಿಸಿದ ಪ್ರಸ್ತಾವಗಳ ಮೇಲೆ ಅನುಮೋದನೆಗೊಂಡಿರುವ, ಜಾರಿಯಾಗದೇ ಇರುವ ಆದೇಶಗಳನ್ನು ಮುಂದಿನ ಆದೇಶ ಬರುವವರೆಗೂ ಜಾರಿ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲು ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








