ಕೊರೊನಾ ಭೀತಿ : ರಾಜ್ಯದ ಜನತೆಗೆ ವಿಶೇಷ ಪ್ಯಾಕೇಜ್ ಘೋಷಣೆ!!

ಬೆಂಗಳೂರು : 

     ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು,  ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇದೀಗ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.

      ಹೌದು, ಬಡವರ ಬಂಧು ಸಾಲಾ ಮನ್ನಾ, 21 ಲಕ್ಷ ಕಟ್ಟಡ ಕಾರ್ಮಿಕರಿಗೆ 1 ಸಾವಿರದ ವರೆಗೆ ಪ್ರೋತ್ಸಾಹ ಧನ ವಿತರಿಸುವ ನಿರ್ಣಯವನ್ನು ಘೋಷಿಸಿದ್ದಾರೆ.

      ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದ ಜನರಿಗಾಗಿ ವಿಶೇಷ ಪ್ಯಾಕೇಜ್ ಇದೀಗ ವಿಧಾನಮಂಡಲದ ಸದನದಲ್ಲಿ ಘೋಷಣೆ ಮಾಡಿದ್ದಾರೆ. 2 ತಿಂಗಳ ಪಡಿತರ ಧಾನ್ಯವನ್ನು ಮುಂಗಡವಾಗಿಯೇ ವಿತರಿಸಲಾಗುತ್ತಿದೆ. ರಾಜ್ಯದ ಬಡವರ ಬಂಧು ಸಾಲಮನ್ನಾವನ್ನು ಮಾಡಲಾಗುತ್ತಿದೆ. 21 ಲಕ್ಷ ಕಟ್ಟಡ ಕಾರ್ಮಿಕರಿಗೆ 1 ಸಾವಿರದ ವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap