ಬೆಂಗಳೂರು :
ರಾಜ್ಯ ಸರ್ಕಾರವು ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ನೆಮ್ಮದಿ ನೀಡುವ ಬದಲು ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್ವೈ, ಸುಮಾರು 30-40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಲಾಗಿದ್ದು, ಅಧಿಕಾರಿಗಳ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ ಹಾದಿ ತುಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸನಗರ ತಾಲೂಕಿನ ಮಸರೂರು ಗ್ರಾಮದ ದಲಿತ ರೈತ ಲಕ್ಷ್ಮಣ್ ಪ್ರಾಣ ಕಳೆದುಕೊಂಡಿದ್ದಾರೆ. ಆರ್ ಎಫ್ ಹನುಮಂತಯ್ಯ ಮತ್ತು ಆತನ ಸಹಚರರ ದಬ್ಬಾಳಿಕೆಯಿಂದ ಲಕ್ಷ್ಮಣ್ ಸಾವನ್ನಪ್ಪಿದ್ದಾರೆ ಎಂದು ಬಿಎಸ್ ವೈ ದೂರಿದ್ದಾರೆ.