ಬೆಂಗಳೂರು:
ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ನಾವಾಗಿಯೇ ಬಿಜೆಪಿಗೆ ಕರೆಯಲು ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರ ಬಗ್ಗೆ ಬಿಎಸ್ವೈ ಹರ್ಷ ವ್ಯಕ್ತಪಡಿಸಿದರು. ” ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ. ನಾವಾಗೇ ಸುಮಲತಾ ಅವರನ್ನು ಕರೆಯಲ್ಲ, ಅವರಾಗೇ ಬಂದರೆ ಸ್ವಾಗತ” ಎಂದು ಹೇಳಿದರು. ಸುಮಲತಾ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 1.25 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ.
ಮೇ 29 ರಂದು ಸಂಸದರೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ವರಿಷ್ಠರ ಸೂಚನೆಯಂತೆ ತೀರ್ಮಾನ ಕೈಗೊಳ್ಳುತ್ತೇವೆ. ಈಗಿನ ಮೈತ್ರಿ ಸರ್ಕಾರದ ಬಗ್ಗೆ ಏನನ್ನೂ ಹೇಳಲು ಹೋಗುವುದಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
