ಬೆಂಗಳೂರು:
ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಸೋಮವಾರ ಕೊನೆಯುಸಿರೆಳೆದಿದ್ದು, ಇಂದು ಅವರ ಅಂತ್ಯಕ್ರಿಯೆಯನ್ನು ನಗರದ ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.
44 ವರ್ಷದ ಬುಲೆಟ್ ಪ್ರಕಾಶ್ ಲಿವರ್ ಅವರು, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೇ ಸೋಮವಾರ ಮಧ್ಯಾಹ್ನ ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ತೆರೆದ ವಾಹನದಲ್ಲಿ ಮನೆಯಿಂದ ಹೆಬ್ಬಾಳ ರುದ್ರಭೂಮಿವರೆಗೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ತರಲಾಯಿತು. ತಂದೆಯ ಅಂತಿಮ ಕಾರ್ಯವನ್ನು ಪುತ್ರ ರಕ್ಷಕ್ ನೆರವೇರಿಸಿದ್ದು, ಮಡಿವಾಳ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು.
ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಆಪ್ತರು ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ