ಮಂಡ್ಯ:
ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ನಾಲೆಗೆ ಉರುಳಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ಬಸ್ಸಿನಲ್ಲಿ ಅಂದಾಜು 40 ರಿಂದ 45 ಜನರಿದ್ದರು ಎಂದು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ರಸ್ತೆಗೆ ತಡೆಗೋಡೆಗಳಿಲ್ಲದ ಕಾರಣ ಚಾಲಕ ನಿಯಂತ್ರಣ ತಪ್ಪಿದ್ದ ಬಸ್ಸು ರಸ್ತೆಯ ಪಕ್ಕದಲ್ಲಿದ್ದ ನಾಲೆಗೆ ಉರುಳಿದೆ. ಈ ಅಪಘಾತದಲ್ಲಿ ಸುಮಾರು 20 ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಕರು ಹೊರಬರಲಾರದೆ ಉಸಿರು ಗಟ್ಟಿ ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿದೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದ್ದು, ‘ಚಾಲಕ ಪ್ರಯಾಣಿಕರನ್ನು ಕೊಲೆ ಮಾಡಿದ್ದಾನೆ’ ಎಂದು ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳೀಯ ಗ್ರಾಮಸ್ಥರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹಲವು ಮೃತದೇಹಗಳನ್ನು ಬಸ್‍ನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
