ಬೆಳಗಾವಿ : ಭೀಕರ ಅಪಘಾತ : 6 ಮಂದಿ ಸಾವು!!

ಬೆಳಗಾವಿ :

      ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸತಾರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

      ಮುಂಬೈ ನಗರದಿಂದ ಬೆಳಗಾವಿಗೆ ಬರುತ್ತಿದ್ದ ಎಸ್‌ಆರ್ ಎಸ್ ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. 20 ಜನರಿಗೆ ಗಂಭೀರ ಗಾಯಗಳಾಗಿವೆ.

      ಮೃತರು ಬೆಳಗಾವಿ ಮೂಲದವರು ಎಂದು ಸಾತಾರಾ ಪೊಲೀಸರು ಮಾಹಿತಿ ನೀಡಿದ್ದು, ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap