ಅನರ್ಹರಿಗೆ ಟಿಕೆಟ್ : 13 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್!!!

ಬೆಂಗಳೂರು :

      ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

      ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 16 ಅನರ್ಹ ಶಾಸಕರು ಬಿಜೆಪಿ ಸೇರಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ 13 ವಿಧಾನಸಭಾ ಕ್ಷೇತ್ರಗಳಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

 ಅಭ್ಯರ್ಥಿಗಳ ಪಟ್ಟಿ :

  1. ಅಥಣಿ ವಿಧಾನಸಭಾ ಕ್ಷೇತ್ರ- ಮಹೇಶ್ ಕುಮಟಳ್ಳಿ
  2. ಕಾಗವಾಡ ವಿಧಾನಸಭಾ ಕ್ಷೇತ್ರ- ಶ್ರೀಮಂತ ಪಾಟೀಲ್
  3. ಗೋಕಾಕ್ ವಿಧಾನಸಭಾ ಕ್ಷೇತ್ರ- ರಮೇಶ್ ಜಾರಕಿಹೊಳಿ
  4. ಯಲ್ಲಾಪುರ ವಿಧಾನಸಭಾ ಕ್ಷೇತ್ರ-ಶಿವರಾಮ್ ಹೆಬ್ಬಾರ್
  5. ಹಿರೇಕೆರೂರು ವಿಧಾನಸಭಾ ಕ್ಷೇತ್ರ- ಬಿ.ಸಿ.ಪಾಟೀಲ್
  6. ವಿಜಯನಗರ ವಿಧಾನಸಭಾ ಕ್ಷೇತ್ರ-ಆನಂದ್ ಸಿಂಗ್
  7. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
  8. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ- ಭೈರತಿ ಬಸವರಾಜ್
  9. ಯಶವಂತಪುರ ವಿಧಾನಸಭಾ ಕ್ಷೇತ್ರ-ಎಸ್.ಟಿ.ಸೋಮಶೇಖರ್
  10. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ- ಗೋಪಾಲಯ್ಯ
  11. ಹೊಸಕೋಟೆ ವಿಧಾನಸಭಾ ಕ್ಷೇತ್ರ- ಎಂಟಿಬಿ ನಾಗರಾಜ್
  12. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ- ಕೆ.ಸಿ.ನಾರಾಯಣಗೌಡ
  13. ಹುಣಸೂರು ವಿಧಾನಸಭಾ ಕ್ಷೇತ್ರ- ಎಚ್.ವಿಶ್ವನಾಥ್

    ಅನರ್ಹ ಶಾಸಕ ರೋಶನ್ ಬೇಗ್ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇನ್ನು ಆರ್.ಶಂಕರ್ ರಾಣಿಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇಬ್ಬರಿಗೂ ಇನ್ನು ಟಿಕೆಟ್ ಸಿಕ್ಕಿಲ್ಲ. ಇನ್ನು 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್ ಇನ್ನು ಗೌಪ್ಯವಾಗಿಟ್ಟಿದ್ದು ಟಿಕೆಟ್ ಯಾರಿಗೆ ನೀಡುತ್ತದೋ ಕಾದು ನೋಡಬೇಕಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap