ಉಪ ಚುನಾವಣೆ : JDS ಅಭ್ಯರ್ಥಿ ಬಚ್ಚೇಗೌಡ ನಾಮಪತ್ರ ತಿರಸ್ಕೃತ!!

ಚಿಕ್ಕಬಳ್ಳಾಪುರ:

     ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಯ ನಾಮಪತ್ರವು ತಿರಸ್ಕೃತಗೊಂಡಿದೆ.

       ಈ ಮೊದಲು ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಅಭ್ಯರ್ಥಿ ಎಂದು ಜೆಡಿಎಸ್ ಹೈಕಮಾಂಡ್ ಫೈನಲ್ ಮಾಡಿತ್ತು. ಆದರೆ ತಡರಾತ್ರಿ ಕೆ.ಪಿ.ಬಚ್ಚೇಗೌಡ ಅವರನ್ನು ಬದಲಾಯಿಸಿರುವ ಜೆಡಿಎಸ್ ಶಿಡ್ಲಘಟ್ಟ ತಾಲೂಕು ನಾಗಮಂಗಲ ನಿವಾಸಿ ರಾಧಾಕೃಷ್ಣ ಅವರಿಗೆ ಮಣೆ ಹಾಕಿತ್ತು, ಈ ನಡುವೆ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಇಬ್ಬರು ಕೂಡ ಹಾಜರಿದ್ದರು, ಕೊನೆಗೆ ಇಂದು ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಹಾಜರಿದ್ದು ಅಚ್ಚರಿ ಎಂಬಂತೆ ಇಬ್ಬರೂ ನಾಮಪತ್ರ ಸಲ್ಲಿಸಿದ್ದರು.

     ಬಚ್ಚೇಗೌಡರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಜೆಡಿಎಸ್ ನಿಂದ ರಾಧಾಕೃಷ್ಣ ಉಳಿದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ